ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳನ್ನು ಸಮಾಜಮುಖಿಯನ್ನಾಗಿ ಮಾಡುತ್ತದೆ. ಇದು ವಿದ್ಯಾರ್ಥಿಗಳ ವ್ಯಕ್ತಿತ್ವದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ತಾಲೂಕಿನ ರಾಂಪುರ ಗ್ರಾಮದಲ್ಲಿ ಸಿಂದಗಿಯ ಎಚ್.ಜಿ.ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಅಡಿಯಲ್ಲಿ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಎನ್ಎಸ್ಎಸ್ ಶಿಬಿರವನ್ನು ಗ್ರಾಮೀಣ ಪ್ರದೇಶದಲ್ಲಿ ಆಯೋಜನೆ ಮಾಡಿದ್ದು ಅತ್ಯಂತ ಸಂತಸ ತಂದಿದೆ. ಗ್ರಾಮಗಳಲ್ಲಿ ಮತ್ತು ಗ್ರಾಮದ ಜನತೆಗೆ ಸ್ವಚ್ಛತೆ, ಪರಿಸರ ಮತ್ತು ಸಾಮಾಜಿಕ ಕಳಕಳಿಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ. ಶಿಬಿರದಲ್ಲಿ ಅತ್ಯಂತ ಪ್ರಾಮಾಣಿಕವಾಗಿ ಸಾಮಾಜಿಕ ಕಳಕಳಿಯನ್ನು ಇಟ್ಟುಕೊಂಡು ಸೇವೆ ಮಾಡಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಹಾ ವಿದ್ಯಾಲಯದ ಪ್ರಾಚಾರ್ಯ ಎ. ಆರ್. ಹೆಗ್ಗನದೊಡ್ಡಿ ಅವರು ಮಾತನಾಡಿ, ಇದೊಂದು ಸಾಮಾಜಿಕ ಕಳಕಳಿಯ ಕಾರ್ಯಕ್ರಮ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ತಮ್ಮ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದರು. ಕಾರ್ಯಕ್ರಮದ ಸಾನಿಧ್ಯವನ್ನು ರಾಂಪುರ ಗ್ರಾಮದ ಆರೂಢ ಮಠದ ಶ್ರೀ ನಿತ್ಯಾನಂದ ಮಹಾರಾಜರು ವಹಿಸಿದ್ದರು. ಶಿಬಿರದ ಸಂಯೋಜನಾಧಿಕಾರಿ ಡಾ.ಎಸ್.ಎಸ್.ಚವಾಣ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆ ಮೇಲೆ ಗ್ರಾಮ ಪಂಚಾಯತಿ ಅಧ್ಯಕ್ಷೆ ನೂರಜಾನ ನದಾಫ, ಶಾಲೆಯ ಮುಖ್ಯ ಗುರುಗಳಾದ ಎನ್.ಆರ್. ಅತ್ತಾರ, ಐ.ಬಿ.ಬಂಕಲಗಿ, ಜೆ.ಪಿ.ಪಾಟೀಲ, ಷಣ್ಮುಖಯ್ಯ ಹಿರೇಮಠ ಸೇರಿ ಇತರರಿದ್ದರು.
ಉಪನ್ಯಾಸಕರಾದ ಬಿ.ಎಸ್.ಬಿರಾದಾರ, ಎಸ್.ಎ.ಪಾಟೀಲ, ಆರ್.ಬಿ.ಹೊಸಮನಿ, ಎಮ್.ಎನ್.ಅಜ್ಜಪ್ಪ, ಎಸ್.ಪಿ.ಬಿರಾದಾರ, ಎಫ್.ಎ.ಹಾಲಪ್ಪನವರ, ಎಮ್.ಸಿ.ಕತ್ತಿ, ಎ.ಆರ್.ಸಿಂದಗಿಕರ, ಎ.ಬಿ.ಪಾಟೀಲ, ಎಸ್.ಎ.ಬಸರಕೋಡ, ಜಿ.ಎಸ್.ಪವಾರ ಸೇರಿದಂತೆ ಶಿಬಿರದ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಉಪನ್ಯಾಸಕ ಸಿದ್ದಲಿಂಗ ಕಿಣಿಗಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.