ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ತಾಲೂಕಿನ ಯರಗಲ್ಲ ಬಿ.ಕೆ ಗ್ರಾಮದಲ್ಲಿ ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ನೂತನ ಪಶು ಚಿಕಿತ್ಸಾಲಯ ನಿರ್ಮಿಸಲಾಗಿದೆ. ಇದನ್ನು ಶಾಸಕ ಅಶೋಕ ಮನಗೂಳಿಯವರು ಶನಿವಾರ ಉದ್ಘಾಟನೆ ಮಾಡಿದರು. ಈ ವೇಳೆ ಮಾತನಾಡಿದ ಅವರು ಸುತ್ತಲಿನ ಗ್ರಾಮಗಳ ರೈತರು ಪಶು ಇಲಾಖೆಯ ಲಾಭವನ್ನು ಪಡೆದುಕೊಳ್ಳಬೇಕು. ಹೈನಾಗಾರಿಕೆ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ಮಾಡಬೇಕು. ಈ ಮೂಲಕ ರೈತರು ಸಹ ಆರ್ಥಿಕವಾಗಿ ಸಬಲರಾಗಬೇಕು ಎಂದು ಹೇಳಿದರು.
ಕಾರ್ಯಕ್ರದಲ್ಲಿ ಪಶು ಸಂಗೋಪನಾ ಇಲಾಖೆಯ ವಿವಿಧ ಅಧಿಕಾರಿಗಳು, ಗ್ರಾಮ ಪಂಚಾಯ್ತಿಯ ಮುಖಂಡರು, ರೈತರು ಸೇರಿದಂತೆ ಅನೇಕರು ಭಾಗವಹಿಸಿದ್ದರು.




