Ad imageAd image

ಶಾಸಕ ಭೈರತಿ ಬಸವರಾಜ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Nagesh Talawar
ಶಾಸಕ ಭೈರತಿ ಬಸವರಾಜ ನಿರೀಕ್ಷಣಾ ಜಾಮೀನು ಅರ್ಜಿ ವಜಾ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮಂಗಳವಾರ ಹೈಕೋರ್ಟ್ ವಜಾ ಮಾಡಿದೆ. ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಹೀಗಾಗಿ ಬಂಧನ ಭೀತಿ ಎದುರಾಗಿದೆ.

ಸೆಷನ್ಸ್ ಕೋರ್ಟ್ ಜಾಮೀನು ನೀಡಲು ನಿರಾಕರಿಸಿತ್ತು. ಹೀಗಾಗಿ ಹೈಕೋರ್ಟ್ ಮೆಟ್ಟಿಲು ಏರಿದ್ದರು. ಇಲ್ಲಿಯೂ ಅರ್ಜಿ ವಜಾಗೊಂಡಿದೆ. ಹೀಗಾಗಿ ಕಳೆದ ಹಲವು ದಿನಗಳಿಂದ ತಲೆ ಮರೆಸಿಕೊಂಡಿರುವ ಶಾಸಕ ಭೈರತಿ ಬಸವರಾಜ ಅವರನ್ನು ಸಿಐಡಿ ಅಧಿಕಾರಿಗಳು ಯಾವ ಕ್ಷಣದಲ್ಲಾದರೂ ಬಂಧಿಸಬಹುದು. ಕಳೆದ ವರ್ಷ ಜುಲೈನಲ್ಲಿ ಭಾರತಿ ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ 5ನೇ ಆರೋಪಿಯಾಗಿದ್ದಾರೆ.

WhatsApp Group Join Now
Telegram Group Join Now
Share This Article