ಪ್ರಜಾಸ್ತ್ರ ಸುದ್ದಿ
ದಾವಣಗೆರೆ(Davanagere): ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆಗೊಂಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ವಾಪಸ್ ಬಿಜೆಪಿಗೆ ಕರೆದುಕೊಂಡು ಬರುತ್ತೇವೆ. ಅವರು ಹೊಸ ಪಕ್ಷ ಕಟ್ಟಲು ಬಿಡುವುದಿಲ್ಲ ಎಂದು ಶಾಸಕರ ಬಿ.ಪಿ ಹರೀಶ್, ಕೇಂದ್ರದ ಮಾಜಿ ಸಚಿವ ಜಿ.ಎಂ ಸಿದ್ದೇಶ್ವರ ಹೇಳಿದ್ದಾರೆ.
ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಯತ್ನಾಳರು ಹೊಸ ಪಕ್ಷ ಕಟ್ಟುತ್ತಾರೆ ಅನ್ನೋದು ಮಾಧ್ಯಮಗಳ ಸೃಷ್ಟಿ. ಈಗಲೂ ಅವರು ನಮ್ಮ ನಾಯಕರು. 2028ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಯತ್ನಾಳರ ನಾಯಕತ್ವ ಅಗತ್ಯವಿದೆ. ದೆಹಲಿಗೆ ನಿಯೋಗ ತೆಗೆದುಕೊಂಡು ಹೋಗುತ್ತೇವೆ ಎಂದು ಸ್ಪಷ್ಟಪಡಿಸಿದರು.