ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಕೇಳಿ ಬಂದಿರುವ ಅತ್ಯಾಚಾರ(Rape Case) ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್(FIR) ದಾಖಲಾಗಿದೆ. ಇದೀಗ ಶಾಸಕ ವಿನಯ್ ಕುಲಕರ್ಣಿ ಖಾಸಗಿ ಸುದ್ದಿ ವಾಹಿನಿಯ ಮುಖ್ಯಸ್ಥ ಹಾಗೂ ಮಹಿಳೆಯ ವಿರುದ್ಧ ದೂರು ಸಲ್ಲಿಸಿದ್ದು, 2 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಅಂತಾ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಆ ಮಹಿಳೆಯನ್ನು ಮುಟ್ಟಿದ್ದರೆ ನನ್ನ ತಾಯಿಯನ್ನು ಮುಟ್ಟಿದಂತೆ. ಇದರಲ್ಲಿ ನನ್ನ ಪಾತ್ರವೇನೂ ಇಲ್ಲ. ಈ ಬಗ್ಗೆ ತನಿಖೆಯಾಗಲಿ ಎಂದಿದ್ದು, ಶಾಸಕ ವಿನಯ್ ಕುಲಕರ್ಣಿ ದೂರಿನ ಮೇರೆಗೆ ಖಾಸಗಿ ಸುದ್ದಿ ವಾಹಿನಿಯ(NEWS Channel Head) ಮುಖ್ಯಸ್ಥೆ ರಾಕೇಶ್ ಶೆಟ್ಟಿ ಹಾಗೂ ಅತ್ಯಾಚಾರ ಆರೋಪ ಮಾಡಿರುವ ಮಹಿಳೆ ವಿರುದ್ಧ ದೂರು ದಾಖಲಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 3(5), 308(2) 61(2)ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಎರಡ್ಮೂರು ಸಲ ನಡೆದ ವಿಡಿಯೋ ಕಾಲ ಸಂಭಾಷಣೆ ಇಟ್ಟುಕೊಂಡು ಈ ರೀತಿ ಆರೋಪ ಮಾಡುತ್ತಿದ್ದಾರೆ. ಎರಡು ವರ್ಷಗಳಿಂದ ಮಹಿಳೆಯೊಂದಿಗೆ ಯಾವುದೇ ಸಂಪರ್ಕವಿಲ್ಲ. ರಾಕೇಶ್ ಶೆಟ್ಟಿ, ಮಹಿಳೆ ಹಾಗೂ ಇತರರು ಆಡಿಯೋ, ವಿಡಿಯೋ ದಾಖಲೆಗಳನ್ನು ಪ್ರಸಾರ ಮಾಡುವ ಮೂಲಕ ನನ್ನ ಘನತೆ ಹಾಳು ಮಾಡಲು ಸಂಚು ರೂಪಿಸಿದ್ದಾರೆ. ಸೆಪ್ಟೆಂಬರ್ 24ರಂದು ರಾಕೇಶ್ ಶೆಟ್ಟಿ ನನಗೆ ಕಾಲ್ ಮಾಡಿ, ಮಹಿಳೆಯೊಂದಿಗೆ ವಿಡಿಯೋ ಕಾಲ್ ಮಾಡಿ ಮಾತನಾಡಿರುವ ಸುದ್ದಿ ಪ್ರಕಟಿಸುವುದಾಗಿ ಹೇಳಿದ್ದರು ಎಂದು ಶಾಸಕ ವಿನಯ್ ಕುಲಕರ್ಣಿ ದೂರಿನಲ್ಲಿ ತಿಳಿಸಿದ್ದಾರೆ.