ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ವಸತಿ ಯೋಜನೆ ಅಡಿಯಲ್ಲಿ ಮನೆ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎನ್ನುವ ಆರೋಪವನ್ನು ಸ್ವತಃ ಕಾಂಗ್ರೆಸ್ ಸರ್ಕಾರದ ಶಾಸಕ ಬಿ.ಆರ್ ಪಾಟೀಲ ಹೇಳಿದರು. ಅಲ್ಲಿಂದ ಒಂದೊಂದೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದರಿಂದ ಬೇಸತ್ತಿರುವ ಕಾಂಗ್ರೆಸ್ ಶಾಸಕರು ರಾಜೀನಾಮೆ ಬೆದರಿಕೆ ಹಾಕುತ್ತಿದ್ದಾರೆ. ಎರಡು ದಿನದಲ್ಲಿ ನಾನು ರಾಜೀನಾಮೆ ಕೊಟ್ಟರೂ ಆಶ್ಚರ್ಯವಿಲ್ಲ ಎಂದು ಶಾಸಕ ರಾಜು ಕಾಗೆ ಹೇಳಿದ್ದಾರೆ.
ಆಡಳಿತ ಪಕ್ಷದ ವಿರುದ್ಧ ಇನ್ನೊಬ್ಬ ಕಾಂಗ್ರೆಸ್ ಶಾಸಕರು ಕಿಡಿ ಕಾರುತ್ತಿದ್ದಾರೆ. ಎರಡು ದಿನಗಳಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾಗುತ್ತೇನೆ. ಆಗ ನಾನು ರಾಜೀನಾಮೆ ಕೊಟ್ಟರೂ ಅಶ್ಚರ್ಯವಿಲ್ಲ ಎನ್ನುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.