ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಸಚಿವರು ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ. ಆಡಳಿತ ಪಕ್ಷದಲ್ಲಿಯೇ ನಮಗೆ ಸ್ಪಂದನೆ ಸಿಗುತ್ತಿಲ್ಲವೆಂದು ಸರ್ಕಾರದ ವಿರುದ್ಧವೇ ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದೆ ವಿಧಾನಸೌಧದಲ್ಲೇ ಆತ್ಮಹತ್ಯೆ ಮಾಡಿಕೊಳ್ಳುವ ಎಚ್ಚರಿಕೆ ನೀಡಿದ್ದೆ. ರೈತರನ್ನು ಬದುಕಿಸುವ ಕೆಲಸವಾಗಬೇಕು. ಇದೇ ರೀತಿ ಮುಂದುವರೆದರೆ ನಾನು ರಾಜೀನಾಮೆ ಕೊಟ್ಟು ಹೊರ ಬರುತ್ತೇನೆ ಎಂದು ಕಿಡಿ ಕಾರಿದ್ದಾರೆ.
ಜನರಿಗೆ ನಾವು ಕೊಟ್ಟ ಭರವಸೆಗಳನ್ನು ಈಡೇರಿಸಲು ಆಗುತ್ತಿಲ್ಲ. ಕಾಣದ ಕೈಗಳು ನಮ್ಮ ಕೆಲಸಕ್ಕೆ ಅಡ್ಡಿ ಮಾಡುತ್ತಿವೆ ಅನ್ನೋ ಶಂಕೆಯಿದೆ. ಜನರಿಗೆ ನೀಡಿದ ಭರವಸೆ ಈಡೇರಿಸಲು ಆಗದಿದ್ದರೆ ಶಾಸಕರಾಗಿದ್ದುಕೊಂಡು ಏನು ಮಾಡುವುದು. ಇದೇ ರೀತಿಯಾದರೆ ರಾಜೀನಾಮೆ ನೀಡಲು ಹಿಂದು ಮುಂದು ನೋಡುವುದಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.