Ad imageAd image

ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು

Nagesh Talawar
ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಧಾರವಾಡ(Dharwad): ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಸಂಜಯ್ ಕರೋಲ್ ಅವರಿದ್ಧ ಪೀಠ ಜಾಮೀನು ನೀಡಿದೆ. ಈ ಹಿಂದೆ ನೀಡಲಾಗಿದ್ದ ಜಾಮೀನು ರದ್ದಾದ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಹಾಜರಾಗಿದ್ದರು.

ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದಾರೆ. ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂನ್ 15, 2016ರಂದು ಯೋಗೇಶಗೌಡ ಕೊಲೆ ನಡೆದಿದೆ. ಇದು ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸಂಚಲನ ಸೃಷ್ಟಿಸಿತ್ತು. ಸಿಬಿಐ ಈ ಪ್ರಕರಣಕ್ಕೆ ಎಂಟ್ರಿ ಕೊಟ್ಟು, ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ. ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದಾರೆ ಅನ್ನೋ ಆರೋಪದ ಮೇಲೆ ಜಾಮೀನು ರದ್ದುಗೊಳಿಸಬೇಕು ಎಂದು ಸಿಬಿಐ ಮನವಿ ಸಲ್ಲಿಸಿತ್ತು. ಹೀಗಾಗಿ ಜಾಮೀನು ರದ್ದಾಗಿತ್ತು. ಇದನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದ್ದರು.

WhatsApp Group Join Now
Telegram Group Join Now
Share This Article