ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 21 ಜನರ ವಿರುದ್ಧ ಸಿಬಿಐ ತಂಡ ಸೆಷನ್ಸ್ ಕೋರ್ಟ್ ಗೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಇದರಲ್ಲಿ ಇಬ್ಬರು ಅಪರಾಧಿಗಳು ಎಂದು ಕೋರ್ಟ್ ಬುಧವಾರ ಸಂಜೆ ಘೋಷಿಸಿದೆ. ತೀರ್ಪು ಕಾಯ್ದಿರಿಸಿದ್ದ ಶಾಸಕರ, ಸಂಸದರ ವಿರುದ್ಧದ ಅಪರಾಧ ಪ್ರಕರಣಗಳ ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶ ಗಜಾನನ ಭಟ್ ತೀರ್ಪು ಪ್ರಕಟಿಸಿದ್ದಾರೆ.
ಅಪರಾಧಿಗಳನ್ನು ಕೂಡಲೇ ವಶಕ್ಕೆ ಪಡೆಯುವಂತೆ ಕೋರ್ಟ್ ಸೂಚನೆ ನೀಡಿದೆ. ಶಿಕ್ಷೆಯ ಪ್ರಮಾಣವನ್ನು ಗುರುವಾರ ಪ್ರಕಟಿಸುವುದಾಗಿ ತಿಳಿಸಿದೆ. ಧಾರವಾಡ ಉಪ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂನ್ 15, 2016ರಂದು ಯೋಗೇಶಗೌಡ ಗೌಡರ ಕೊಲೆ ಮಾಡಲಾಗಿತ್ತು.




