ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮೊಬೈಲ್ ಅಂಗಡಿಯೊಂದು ಸುಟ್ಟು ಭಸ್ಮವಾದ ಘಟನೆ ಸಿಲಿಕಾನ್ ಸಿಟಿಯ ಬಾಣಸವಾಡಿ ಹತ್ತಿರದ ಜಯಂತಿ ಸರ್ಕಲ್ ಬಳಿ ನಡೆದಿದೆ. ಈ ಘಟನೆಯಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ. ಸೋಮವಾರ ಮುಂಜಾನೆ 4.30ಕ್ಕೆ ಈ ಘಟನೆ ನಡೆದಿದೆ.
ಅಗ್ನಿ ಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸುವ ಕೆಲಸ ಮಾಡಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬೆಂಕಿ ನಂದಿಸುವ ಕೆಲಸ ಮಾಡಲಾಯಿತು. ಆದರೆ, ಅಷ್ಟರಲ್ಲಿ ಅಂಗಡಿಯಲ್ಲಿದ್ದ ಎಲೆಕ್ಟ್ರಾನಿಕ್ ವಸ್ತುಗಳೆಲ್ಲ ಸುಟ್ಟು ಹೋಗಿವೆ.




