ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನು, ಸ್ಯಾಂಡಲ್ ವುಡ್ ಸೆಂಚುರಿ ಸ್ಟಾರ್ ಶಿವರಾಜಕುಮಾರ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಆ್ಯಕ್ಷನ್ ಪ್ರಿನ್ಸ್ ಧ್ರುವ್ ಸರ್ಜಾ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ ಎಂದು ಹೇಳುವ ಆಡಿಯೋ ವೈರಲ್ ಆಗಿದೆ. ಈ ಹಿನ್ನಲೆಯಲ್ಲಿ ಅವರ ವಿರುದ್ಧ ರಾಜ್ಯಾದ್ಯಂತ 100ಕ್ಕೂ ಹೆಚ್ಚು ಪ್ರಕರಣ ದಾಖಲಾಗಿವೆ ಎಂದು ತಿಳಿದು ಬಂದಿದೆ. ಈಗಾಗ್ಲೇ ಅತ್ಯಾಚಾರ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ನಟನಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.
ನಿರ್ಮಾಪಕ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಖಿಲ ಕರ್ನಾಟಕ ಡಾ.ರಾಜಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟದ ಗೌರವಾಧ್ಯಕ್ಷ ಎನ್.ಆರ್ ರಮೇಶ್ ಅವರು ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಹೋರಾಟ ಮಾಡಲು ನಿರ್ಧರಿಸಿದ್ದು, ಬುಧವಾರ ಚಲನಚಿತ್ರ ವಾಣಿಜ್ಯ ಮಂಡಳಿಯೊಂದಿಗೆ ಚರ್ಚಿಸುವುದಾಗಿ ಹೇಳಿದ್ದಾರೆ. ಅಭಿಮಾನಿಗಳ ಸಂಘಗಳ ಮೂಲಕ ರಾಜ್ಯಾದ್ಯಂತ 100ಕ್ಕೂ ಹೆಚ್ಚು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.