ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಸಾರಿಗೆ ನಿಯಮಗಳನ್ನು ಉಲ್ಲಂಘನೆ ಹಿನ್ನೆಲೆಯಲ್ಲಿ ಸುಮಾರು 100ಕ್ಕೂ ಹೆಚ್ಚು ಶಾಲಾ(School Van) ವಾಹನಗಳನ್ನು ಆರ್ ಟಿಒ(RTO) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನಗರದ ಪ್ರಸಿದ್ಧ ಖಾಸಗಿ ಶಾಲೆಗಳ ವಾಹನಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ. ಈ ಮೂಲಕ ಬಿಸಿ ಮುಟ್ಟಿಸುವ ಕೆಲಸ ನಡೆದಿದೆ.
ವಾಹನಗಳ ನೋಂದಣಿ, ಡಿಎಲ್(DL), ಇನ್ಸುರೆನ್ಸ್, ಎಫ್ ಸಿ(FC) ಸೇರಿದಂತೆ ಹಲವು ನಿಯಮಗಳಿಗೆ ಸಂಬಂಧಿಸಿದಂತೆ ಶಾಲಾ ವಾಹನಗಳನ್ನು ವಶಕ್ಕೆ ಪಡೆದು ತಪಾಸಣೆ ನಡೆಸಲಾಗುತ್ತಿದೆ. ಬಹುತೇಕ ಶಾಲಾ ವಾಹನಗಳು ಶಾಲೆಯ ಸಂಸ್ಥೆಯ ಹೆಸರಿಗೆ ಇರುವ ಬದಲು ಬೇರೆ ಬೇರೆ ವ್ಯಕ್ತಿಗಳ ಹೆಸರಿನಲ್ಲಿ ನೋಂದಣಿಯಾಗಿರುವುದು ಕಂಡು ಬಂದಿದೆ. ಹೀಗಾಗಿ ಭರ್ಜರಿ ಕಾರ್ಯಾಚರಣೆ ನಡೆಸಿ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.