ಪ್ರಜಾಸ್ತ್ರ ಸುದ್ದಿ
ಚಂಡೀಗಢ(chandigarh): ಸಾಮಾಜಿಕ ಜಾಲತಾಣಗಳಲ್ಲಿ ಇಂದು ಏನೆಲ್ಲ ನಡೀತಿದೆ ಎನ್ನುವುದು ಪ್ರತಿಯೊಬ್ಬರಿಗೂ ಗೊತ್ತಿದೆ. ಒಳ್ಳೆಯದಕ್ಕಿಂತ ಕೆಟ್ಟದಕ್ಕೆ ಹೆಚ್ಚು ಬಳಕೆಯಾಗುತ್ತಿದೆ. ಈ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಕೆಲಸಗಳು ನಡೆಯತ್ತಿವೆ. ಈ ಕಾರಣಕ್ಕಾಗಿಯೇ ಪಂಜಾಬಿನಲ್ಲಿ(punjab) 200ಕ್ಕೂ ಹೆಚ್ಚು ಸಾಮಾಜಿಕ ಜಾಲತಾಣಗಳ ಖಾತೆಯನ್ನು ನಿರ್ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಹಿಂಸೆಗೆ ಪ್ರಚೋದನೆ ನೀಡುವುದು, ಅಪರಾಧಿ ಕೃತ್ಯಗಳಲ್ಲಿ ಭಾಗಿಯಾದವರನ್ನು ವೈಭವೀಕರಿಸುವಂತಹ ಸೋಷಿಯಲ್ ಮೀಡಿಯಾ ಖಾತೆಗಳನ್ನು ಬ್ಯಾನ್ ಮಾಡಲಾಗಿದೆ.
132 ಫೇಸ್ ಬುಕ್ ಹಾಗೂ 71 ಇನ್ ಸ್ಟಾಗ್ರಾಮ್ ಅಕೌಂಟ್ ಗಳನ್ನು ನಿರ್ಬಂಧಿಸಲಾಗಿದೆ. ಈ ಅಕೌಂಟ್ ಗಳಲ್ಲಿ ದರೋಡೆಕೋರರು, ಕೊಲೆಪಾತಕರ ಹೆಸರುಗಳನ್ನು ಬಳಕೆ ಮಾಡುವುದು, ಪ್ರತಿಸ್ಪರ್ಧಿ ತಂಡದ ಸದಸ್ಯರನ್ನು ಹತ್ಯೆ ಮಾಡುವುದು ಅದನ್ನು ಸಾಮಾಜಿಕ(Social Media) ಜಾಲತಾಣಗಳಲ್ಲಿ ಹಂಚಿಕೊಳ್ಳುವುದು, ಪೊಲೀಸರಿಗೆ ಬೆದರಿಕೆ ಹಾಕುವುದು ಮಾಡುತ್ತಿದ್ದರಂತೆ. ಈ ಸಂಬಂಧ ಇಲ್ಲಿಯ ತನಕ 37 ಅಪರಾಧಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ.