ಪ್ರಜಾಸ್ತ್ರ ಸುದ್ದಿ
ಬೀದರ(Bidara): ಜಿಲ್ಲೆಯ ಹುಮನಾಬಾದ್ ತಾಲೂಕಿನ ಬಸವತೀರ್ಥ ವಿದ್ಯಾಪೀಠ ಶಾಲೆಯಲ್ಲಿ ಒಗ್ಗರಣೆ ಅನ್ನ ತಿಂದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ. ವಾಂತಿ ಬೇಧಿ ಮಾಡಿಕೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದಕ್ಕೆ ಕಾರಣ ಏನು ಅನ್ನೋದು ತಿಳಿದು ಬರಬೇಕಿದೆ.
ಪಟ್ಟಣದ ಹೊರವಲದಲ್ಲಿರುವ ವಸತಿ ಶಾಲೆಯಲ್ಲಿ ರಾತ್ರಿ ಉಳಿದ ಅನ್ನಕ್ಕೆ ಇಂದು ಮುಂಜಾನೆ ಒಗ್ಗರಣೆ ಹಾಕಲಾಗಿದೆಯಂತೆ. ಇದನ್ನು ತಿಂದ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ವಿಚಾರ ತಿಳಿದು ಬಂದಿದೆ. ಆಸ್ಪತ್ರೆಗೆ ಎಂಎಲ್ಸಿ ಭೀಮರಾವ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.