ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಸಿಲಿಕಾನ್ ಸಿಟಿಯಲ್ಲೊಂದು ಘೋರ ದುರಂತ ನಡೆದಿದೆ. ಮಕ್ಕಳಿಬ್ಬರನ್ನು ತಾಯಿಯೊಬ್ಬಳು ಉಸಿರುಕಟ್ಟಿಸಿ ಕೊಂದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಕೋಡಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕುಸುಮಾ(35) ಎನ್ನುವ ಮಹಿಳೆ ತನ್ನ 6 ವರ್ಷದ ಮಗ ಹಾಗೂ 7 ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಂದಿದ್ದಾಳೆ. ನಂತರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕೌಟುಂಬಿಕ ಕಲಹದಿಂದ ಈ ರೀತಿ ಮಾಡಿದ್ದಾಳೆ ಎಂದು ಹೇಳಲಾಗುತ್ತಿದೆ. ಘಟನೆಗೂ ಮೊದಲು ಡೆತ್ ನೋಟ್ ಬರೆದಿದ್ದಾಳೆ. ನಮ್ಮ ಸಾವಿಗೆ ನಾವೇ ಕಾರಣವೆಂದು ಬರೆದಿದ್ದಾಳಂತೆ. ಏನೂ ಅರಿಯದ ಮಕ್ಕಳನ್ನು ಕೊಂದು ತಾನೂ ಸಾವಿಗೆ ಶರಣಾಗಿರುವುದು ನಿಜಕ್ಕೂ ದಾರುಣ ಘಟನೆ. ಕುಟುಂಬಸ್ಥರು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ.