Ad imageAd image

ಮದರ್ ಇಂಡಿಯಾ ಸೇರಿ ಎಲ್ಲರನ್ನು ಅನ್ ಫಾಲೋ ಮಾಡಿದ ‘ಚಕ್ರವರ್ತಿ’

Nagesh Talawar
ಮದರ್ ಇಂಡಿಯಾ ಸೇರಿ ಎಲ್ಲರನ್ನು ಅನ್ ಫಾಲೋ ಮಾಡಿದ ‘ಚಕ್ರವರ್ತಿ’
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ನಟ ದರ್ಶನ್ ತಮ್ಮ ಸಾಮಾಜಿಕ ಜಾಲತಾಣಗಳಾದ ಎಕ್ಸ್, ಇನ್ಸ್ಟಾ, ಫೇಸ್ ಬುಕ್ ಸೇರಿದಂತೆ ಎಲ್ಲೆಡೆ ಪ್ರತಿಯೊಬ್ಬರನ್ನು ಅನ್ ಫಾಲೋ ಮಾಡಿದ್ದಾರೆ. ಮದರ್ ಇಂಡಿಯಾ ಎಂದು ಹೇಳುವ ನಟಿ, ಮಾಜಿ ಸಂಸದೆ ಸುಮಲತಾ ಅಂಬರೀಶ್, ನಟ ಅಭಿಷೇಕ್ ಅಂಬರೀಶ್ ಸೇರಿದಂತೆ ಎಲ್ಲರನ್ನು ಅನ್ ಫಾಲೋ ಮಾಡಿದ್ದು, ಇದು ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ. ಇದರ ನಡುವೆ ಸುಮಲತಾ ಅಂಬರೀಶ್ ಅವರು, ಎಕ್ಸ್ ಖಾತೆಯಲ್ಲಿ ಸರಣಿ ಪೋಸ್ಟ್ ಮಾಡಿರುವುದನ್ನು ನೋಡಿದ ಜನರು ಇದು ದರ್ಶನ್ ಗೆ ತಿರುಗೇಟು ಕೊಟ್ಟಿದ್ದಾರೆ ಎಂದು ಹೇಳುತ್ತಿದ್ದಾರೆ.

ಮಾಧ್ಯಮಗಳಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆಯಾಗಿರುವುದರಿಂದ ಸುಮಲತಾ ಅಂಬರೀಶ್ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ನನ್ನ ಹಿಂದಿನ ಒಂದು ಪೋಸ್ಟ್ ಕುರಿತು ಅನಗತ್ಯವಾದ ವಿವಾದ ಸೃಷ್ಟಿಯಾಗಿರುವುದರಿಂದ ಈ ಸ್ಪಷ್ಟನೆ ನೀಡಲು ನಾನು ಇಚ್ಛಿಸುತ್ತೇನೆ. ನನ್ನ ಪೋಸ್ಟ್ ಯಾರನ್ನಾದರೂ ಗುರಿಯಾಗಿಸಿಕೊಂಡು ಮಾಡಲಾದದ್ದಲ್ಲ. ಅದು ಸರಳವಾಗಿ ಹಂಚಿಕೊಂಡ ವಿಷಯ ಮಾತ್ರ. ಯಾರು ನನ್ನ ಫಾಲೋ ಮಾಡುತ್ತಾರೆ. ಅಥವ ಅನ್ ಫಾಲೋ ಮಾಡುತ್ತಾರೆ ಎಂಬುದನ್ನು ಗಮನಿಸುವ ಅಭ್ಯಾಸ ಹೊಂದಿಲ್ಲ. ಮಾಧ್ಯಮಗಳಲ್ಲಿ ಈ ವಿಷಯದ ಬಗ್ಗೆ ಸುದ್ದಿಗಳ ಬಂದ ಬಳಿಕವೇ ನನಗೂ ಈ ಬೆಳವಣಿಗೆ ತಿಳಿಯಿತು.

ನಿಜಕ್ಕೂ ದರ್ಶನ್ ಅವರು ಇನ್ ಸ್ಟಾಗ್ರಾಂ ಮತ್ತು ಟ್ವಿಟರ್ ನಲ್ಲಿ ಯಾರನ್ನೂ ಫಾಲೋ ಮಾಡುತ್ತಿಲ್ಲ. ಇದು ಅವರ ವೈಯಕ್ತಿಕ ಆಯ್ಕೆ ಮತ್ತು ಅದನ್ನು ಎಲ್ಲರೂ ಗೌರವಿಸಬೇಕು. ಇದನ್ನು ಬೇರೆ ರೀತಿಯಲ್ಲಿ ಅರ್ಥೈಸುವುದು ಅಗತ್ಯವಿಲ್ಲ. ತಾಯಿ-ಮಗನ ಸಂಬಂಧದಲ್ಲಿ ಅನಗತ್ಯವಾದ ವಿವಾದಗಳನ್ನು ಸೃಷ್ಟಿಸಬೇಡಿ ಎಂದು ಎಲ್ಲರಲ್ಲಿ ಮನವಿ ಮಾಡುತ್ತೇನೆ. ನನ್ನ ಪೋಸ್ಟ್ ಯಾರನ್ನೂ ಉದ್ದೇಶಿಸಿಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ. ನಾನು ನನ್ನ ಕುಟುಂಬ ಹಾಗೂ ಆಪ್ತರ ವಿಚಾರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಎಳೆದು ತರುವ ಅಭ್ಯಾಸವನ್ನು ಎಂದಿಗೂ ಹೊಂದಿಲ್ಲ ಎಂದು ಬರೆಯುವ ಮೂಲಕ ಇದೀಗ ಹುಟ್ಟಿಕೊಂಡಿರುವ ವಿವಾದಕ್ಕೆ ತೆರೆ ಎಳೆದಿದ್ದಾರೆ.

WhatsApp Group Join Now
Telegram Group Join Now
Share This Article