ಪ್ರಜಾಸ್ತ್ರ ಸುದ್ದಿ
ಶಿವಮೊಗ್ಗ(Shivamogga): ತಾಯಿಯೇ ಮಗಳನ್ನು ಕೊಲೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿರುವ ಮೆಗ್ಗಾನ್ ಆಸ್ಪತ್ರೆಗೆ ಸಂಬಂಧಿಸಿದ ಮೆಗ್ಗಾನ್ ಕ್ವಾಟರ್ಸ್ ನಲ್ಲಿ ನಡೆದಿದೆ. ಶುಕ್ರವಾರ ಮುಂಜಾನೆ ಬೆಳಕಿಗೆ ಬಂದಿದೆ. ಪೂರ್ವಿಕಾ(11) ಕೊಲೆಯಾದ ಬಾಲಕಿ ಹಾಗೂ ಶ್ರುತಿ(38) ಆತ್ಮಹತ್ಯೆ ಮಾಡಿಕೊಂಡ ತಾಯಿ ಆಗಿದ್ದಾಳೆ.
ಶ್ರುತಿ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಳಂತೆ. ಗುರುವಾರ ರಾತ್ರಿ ಮಗಳ ತಲೆಗೆ ಮಚ್ಚಿನಿಂದ ಹೊಡೆದು ಹತ್ಯೆ ಮಾಡಿದ್ದಾಳೆ. ನಂತರ ಆಕೆ ಫ್ಯಾನ್ ಗೆ ನೇಣು ಹಾಕಿಕೊಂಡಿದ್ದಾಳೆ. ಪತಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, ಗುರುವಾರ ನೈಟ್ ಶಿಫ್ಟ್ ಹೋಗಿದ್ದರು. ಇಂದು ಮುಂಜಾನೆ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.