ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ಸಾಮಾಜಿಕ ಜಾಲತಾಣದಲ್ಲಿ ಯುವಕನೊಬ್ಬ ಹಂಚಿಕೊಂಡಿದ್ದ ಫೋಟೋ ವಿಚಾರಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯದವರು ಉದಯಗಿರಿ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರೊಂದಿಗೆ ವಾಗ್ವಾದ ನಡೆದಿತ್ತು. ಆಗ ಸಮಾಜದ ಮುಖಂಡ ಮೌಲ್ವಿಯೊಬ್ಬರು ಪ್ರಚೋದನಕಾರಿ ಭಾಷಣ ಮಾಡಿದ್ದರಿಂದ, ಕಲ್ಲು ತೂರಾಟ ನಡೆಸಲಾಗಿತ್ತು. ಪೊಲೀಸರ ಜೀಪು, ಠಾಣೆಯ ಮೇಲೆ ಕಲ್ಲು ತೂರಾಟ ಮಾಡಲಾಗಿತ್ತು. ಈ ಸಂಬಂಧ ಸಿಸಿಬಿ ಪೊಲೀಸರು ಇದೀಗ ಮೌಲ್ವಿ ಮುಸ್ತಾಕ್ ನನ್ನು ಬಂಧಿಸಿದ್ದಾರೆ.
ಘಟನೆ ನಡೆದ 11 ದಿನಗಳ ಬಳಿಕ ಮೌಲ್ವಿ ಮುಸ್ತಾಕ್ ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈಗಾಗ್ಲೇ ಘಟನೆ ಸಂಬಂಧ 8ಕ್ಕೂ ಹೆಚ್ಚು ಯುವಕರನ್ನು ಬಂಧಿಸಲಾಗಿದೆ. ಈಗ ಪ್ರಚೋದನೆ ನೀಡಿ ಗಲಾಟೆಗೆ ಕಾರಣನಾಗಿದ್ದ ಮೌಲ್ವಿಯ ಬಂಧನವಾಗಿದೆ. ಮುಂಜಾಗ್ರತ ಕ್ರಮವಾಗಿ ಉದಯಗಿರಿ ಪೊಲೀಸ್ ಠಾಣೆಯ ಸುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ.