ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ನಗರದಲ್ಲಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು ನಡೆಸಿದ ಬೃಹತ್ ಪ್ರತಿಭಟನೆಯಲ್ಲಿ ಸಂಸದ ರಮೇಶ ಜಿಗಜಿಣಗಿ ಭಾಗವಹಿಸಿ, ಅವರ ಬೇಡಿಕೆಗಳನ್ನು ಆಲಿಸಿದರು. ಬಳಿಕ ಮಾತನಾಡಿ, ನಗರಾಭಿವೃದ್ಧಿ ಇಲಾಖೆಯ ಮಾಹಾನಗರ ಪಾಲಿಕೆ ಸಿಬ್ಬಂದಿಯೂ ಸರ್ಕಾರಿ ನೌಕರರಾಗಿದ್ದು ಸಂಬಳದ ಶೇಕಡ 80ರಷ್ಟು ರಾಜ್ಯ ಸರ್ಕಾರ ನೀಡುವುದಾಗಿ ಶೇಕಡ 20ರಷ್ಟು ಸ್ಥಳೀಯ ಸಂಸ್ಥೆಯಿಂದ ಹಣ ಭರ್ತಿ ಮಾಡಲು ಆದೇಶಿಸಿರೋದು ವೈಜ್ಞಾನಿಕವಾಗಿದ್ದು ಈ ನೌಕರರಿಗೆ ಅನ್ಯಾಯವಾಗುತ್ತದೆ ಎಂದರು.
ಸರ್ಕಾರಿ ನೌಕರರಿಗೆ ಸಿಗುವ ಎಲ್ಲ ಸೌಲಭ್ಯಗಳನ್ನು ಈ ಸ್ಥಳೀಯ ಸಂಸ್ಥೆಗಳ ನೌಕರರಿಗೆ ಕೊಡಬೇಕು. ಈ ಕುರಿತು ಮುಖ್ಯಮಂತ್ರಿಗಳಿಗೆ ಬರೆದ ಪತ್ರವನ್ನು ಸಂಘಟನೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ನೀಡಿದರು. ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ರಾಜ್ಯದ ಮುಖ್ಯಮಂತ್ರಿಗಳ ಜೊತೆಗೆ ಈ ನಿಟ್ಟಿನಲ್ಲಿ ಗಮನಸೆಳೆಯುವುದಾಗಿ ಭರವಸೆ ನೀಡಿದರು. ಸುಂದರಾಬಾಯಿ ಲಕ್ಷ್ಮಣ್ ರಣದೇವಿ ಮಾತನಾಡಿ ಸಮಸ್ಯೆ ಪರಿಹಾರಕ್ಕೆ ವಿನಂತಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ, ಬಿಜೆಪಿ ಮುಖಂಡ ಸಂಜು ಐಹೊಳ್ಳಿ, ಮಹಾನಗರ ಪಾಲಿಕೆ ಸದಸ್ಯ ಮಳುಗೌಡ ಪಾಟೀಲ, ಜಿಲ್ಲಾ ಮಾಧ್ಯಮ ಸಂಚಾಲಕ ವಿಜಯ್ ಜೋಶಿ ಸೇರಿ ಅನೇಕರು ಭಾಗವಹಿಸಿದ್ದರು.