ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಜನಾರ್ಧನ್ ರೆಡ್ಡಿ ಮಾತನಾಡಿದ್ದು, ಇದರ ಹಿಂದೆ ಮಾಜಿ ಜಿಲ್ಲಾಧಿಕಾರಿ, ಹಾಲಿ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಮುಸುಕುಧಾರಿ ತಮಿಳುನಾಡು ಮೂಲದವನು. ಅವನಿಗೂ ಸಸಿಕಾಂತ್ ಗೂ ನಂಟಿದೆ ಅಂತಾ ಗಂಭೀರವಾಗಿ ಆರೋಪಿಸಿದ್ದಾರೆ.
ಬುರುಡೆ ರಹಸ್ಯದ ಮಾಸ್ಟರ್ ಮೈಂಡ್ ಸಸಿಕಾಂತ್ ಸೆಂಥಿಲ್. ಈ ಪ್ರಕರಣದ ತನಿಖೆಯನ್ನು ಎನ್ಐ ಅಥವ ಸಿಬಿಐಗೆ ಕೊಡಬೇಕು. ಇಲ್ಲದಿದ್ದರೆ ಹೈಕೋರ್ಟ್ ಅಥವ ಸುಪ್ರೀಂ ಕೋರ್ಟ್ ಜಡ್ಜ್ ಮೂಲಕ ತನಿಖೆ ನಡೆಸಬೇಕು ಅಂತಾ ಹೇಳಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಹೊಸ ತಿರುವು ನೀಡಿದ್ದಾರೆ. ಈ ಮೂಲಕ ಇಡೀ ಪ್ರಕರಣದ ಹಿಂದೆ ಕಾಂಗ್ರೆಸ್ ಇದೆ ಎನ್ನುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ.