ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(MUDA) ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಸ್ಥರ ಮೇಲೆ ಆರೋಪ ಕೇಳಿ ಬಂದಿದೆ. ಇದರ ತನಿಖೆಯನ್ನು ಸಿಬಿಐಗೆ(CBI) ವಹಿಸಬೇಕೆಂದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಅದನ್ನು ಹೈಕೋರ್ಟ್ ತಿರಸ್ಕರಿಸಿದೆ.
ಮುಡಾ ಪ್ರಕರಣದ ದೂರುದಾರರಾಗಿರುವ ಸಾಮಾಜಿಕ ಕಾರ್ಯಕರ್ತರ ಸ್ನೇಹಮಹಿ ಕೃಷ್ಣ ಅವರು ಹೈಕೋರ್ಟ್(High Court) ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಇದರ ತೀರ್ಪನ್ನು ಕಾಯ್ದರಿಸಲಾಗಿತ್ತು. ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣದ ವಿಶೇಷ ನ್ಯಾಯಾಪೀಠ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಧಾರವಾಡ ಪೀಠದಿಂದ ತೀರ್ಪು ಪ್ರಕಟಿಸಿದ್ದಾರೆ. ಇದರಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಒಂದಿಷ್ಟು ನಿರಾಳವಾಗಿದೆ. ವಿಪಕ್ಷಗಳು ಸಹ ಸಿಬಿಐಗೆ ಒಪ್ಪಿಸಿ ಎಂದು ಆಗ್ರಹಿಸಿದ್ದವು.