ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಭಾವಮೈದ ಅವರ ವಿರುದ್ಧ ಮುಡಾದ ನಿವೇಶನ ಅಕ್ರಮ ಪ್ರಕರಣದಲ್ಲಿ ಹೆಸರು ಕೇಳಿ ಬಂದಿದೆ. ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮದ ಕುರಿತು ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಇದರ ವಿಚಾರಣೆಯನ್ನು ಜನವರಿ 25ಕ್ಕೆ ನಿಗದಿ ಮಾಡಲಾಗಿದೆ.
ಗುರುವಾರ ನಡೆದ ವಿಚಾರಣೆಯನ್ನು ಆಲಿಸಿದ ಹೈಕೋರ್ಟ್ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಲು ಆದೇಶಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಜನವರಿ 25ಕ್ಕೆ ಮುಂದೂಡಿಕೆ ಮಾಡಿದೆ. ಇನ್ನು ಮೈಸೂರು ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ಮುಡಾ ಅಕ್ರಮದ ತನಿಖೆ ನಡೆಯುತ್ತಿದೆ. ಇದರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಬೆಂಗಳೂರಿನಿಂದ ಮೈಸೂರು ತನಕ ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಸಿದ್ದವು.