ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮುಡಾ(MUDA) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಆಯುಕ್ತ ಡಿ.ಬಿ ನಟೇಶ್ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನಟೇಶ್ ಅವರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ವಿಚಾರಣೆ ನಡೆಸಿದರು. ನಂತರ ಶಾಂತಿನಗರದಲ್ಲಿರುವ ಇಡಿ(ED) ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ವಿಚಾರಣೆಗೆ ಸ್ಪಂದಿಸುತ್ತಿಲ್ಲವೆಂದು ಹೇಳಲಾಗುತ್ತಿದ್ದು, ಅವರನ್ನು ಬಂಧಿಸುವ ಸಾಧ್ಯತೆಯಿದೆ.
ಡಿ.ಬಿ ನಟೇಶ್ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ಸಂದರ್ಭದಲ್ಲಿ 50:50 ಅನುಪಾತದಲ್ಲಿ 928 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪವಿದೆ. ಇದೇ ವೇಳೆಯೆ ಸಿಎಂ ಪತ್ನಿಗೆ ನಿವೇಶನ ಹಂಚಿಕೆಯಾಗಿದೆ.