ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮುಡಾ ಪ್ರಕರಣದ ತನಿಖೆ ಈಗಾಗ್ಲೇ ನಡೆಯುತ್ತಿದೆ. ರಾಜಕೀಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬವನ್ನು ಹಿಂಡಿ ಹಿಪ್ಪೆ ಮಾಡಲಾಗುತ್ತಿದೆ. ಇದೀಗ ಹೈಕೋರ್ಟ್ ನೋಟಿಸ್ ನೀಡಿದೆ. ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ಸಂಬಂಧ ಹೈಕೋರ್ಟ್, ಸಿಎಂ, ಕೇಂದ್ರ ಸರ್ಕಾರ, ಲೋಕಾಯುಕ್ತ ಹಾಗೂ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಜೆ.ದೇವರಾಜು, ಮಲ್ಲಿಕಾರ್ಜುನ್ ಸ್ವಾಮಿ, ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ, ರಾಜ್ಯ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಮೈಸೂರು ಜಿಲ್ಲಾ ಲೋಕಾಯುಕ್ತ ಎಸ್ಪಿ, ಲೋಕಾಯುಕ್ತ ಎಡಿಜಿಪಿ, ರಾಜ್ಯ ಡಿಜಿ ಐಜಿಪಿ, ಸಿಬಿಐ ನಿರ್ದೇಶಕರು, ವಿಜಯನಗರ ಪೊಲೀಸ್ ಠಾಣಾಧಿಕಾರಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ಧ ಏಕಸದಸ್ಯಪೀಠ ಮಂಗಳವಾರ ಆದೇಶಿಸಿದೆ.
25-11-2024ರವರೆಗೆ ನಡೆಸಿದ ತನಿಖೆಯನ್ನು ದಾಖಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ನಿರ್ದೇಶನ ನೀಡಿದೆ. ನವೆಂಬರ್ 26ಕ್ಕೆ ಪ್ರಕರಣವನ್ನು ಮುಂದೂಡಿದೆ. ಟಿ.ಜೆ ಅಬ್ರಹಾಂ, ಸ್ನೇಹಮಯಿ ಕೃಷ್ಣ, ಪ್ರದೀಪಕುಮಾರ್ ಎಂಬುವರು ಮೂಡಾ ಪ್ರಕರಣದಲ್ಲಿ ದೂರುದಾರರಾಗಿದ್ದಾರೆ. ವಿಪಕ್ಷಗಳು ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಕಟ್ಟಿ ಹಾಕಲು ಯತ್ನಿಸುತ್ತಿದ್ದಾರೆ.