ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮೈಸೂರು ಅಭಿವೃದ್ಧಿ(MUDA) ಪ್ರಾಧಿಕಾರದಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ನೀಡಿದ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ(Siddaramaiah) ರಿಟ್ ಅರ್ಜಿ ಸಲ್ಲಿಸಿದ್ದರು. ಇದನ್ನು ಹೈಕೋರ್ಟ್ ವಜಾಗೊಳಿಸಿದೆ. ಹೀಗಾಗಿ ಸಿಎಂಗೆ ಟೆನ್ಷನ್ ಶುರುವಾಗಿದೆ. ವಾದ, ಪ್ರತಿವಾದ ಆಲಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಸಿಎಂ ಅರ್ಜಿ ವಜಾಗೊಳಿಸಿದೆ.
ಸಿಎಂ ಪರವಾಗಿ ಸುಪ್ರೀಂ ಕೋರ್ಟ್(Supreme Court) ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ವಾದ ಮಂಡಿಸಿದ್ದರು. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ದೂರುದಾರ ಟಿ.ಜೆ ಅಬ್ರಾಹಂ ಪರ ರಂಗನಾಥ ರೆಡ್ಡಿ, ಸ್ನೇಹಮಹಿ ಕೃಷ್ಣ ಪರ ಮಣೀಂದರ್ ಸಿಂಗ್ ಸೇರಿದಂತೆ ಅನೇಕ ವಕೀಲರು ವಾದ ಪ್ರತಿವಾದ ನಡೆಸಿದ್ದರು. ಇದೇ 12ರಂದು ತೀರ್ಪು ಕಾಯ್ದಿರಸಲಾಗಿತ್ತು. ಇದೀಗ ಸಿಎಂ ಅರ್ಜಿ ವಜಾಗೊಳಿಸಲಾಗಿದೆ. ಇನ್ನು ರಾಜ್ಯ ರಾಜಕೀಯದಲ್ಲಿ ಏನೆಲ್ಲ ಬೆಳವಣಿಗೆಗಳು ಆಗುತ್ತೆ ಕಾದು ನೋಡಬೇಕು.