Ad imageAd image

ಮುಡಾ ಹಗರಣ, ಸಿಎಂ ರಾಜೀನಾಮೆ ನೀಡಲೇಬೇಕಾಗುತ್ತದೆ: ವಿಜಯೇಂದ್ರ

ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ನಡೆದಿದೆ ಎನ್ನುವ ಕಾರಣಕ್ಕಾಗಿಯೇ ಹಿಂದಿನ ಆಯುಕ್ತರನ್ನು ಅಮಾನತು ಮಾಡಲಾಗಿದೆ.

Nagesh Talawar
ಮುಡಾ ಹಗರಣ, ಸಿಎಂ ರಾಜೀನಾಮೆ ನೀಡಲೇಬೇಕಾಗುತ್ತದೆ: ವಿಜಯೇಂದ್ರ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಮೈಸೂರು ಅಭಿವೃದ್ಧಿ(MUDA) ಪ್ರಾಧಿಕಾರದಲ್ಲಿ ಅಕ್ರಮ ನಡೆದಿದೆ ಎನ್ನುವ ಕಾರಣಕ್ಕಾಗಿಯೇ ಹಿಂದಿನ ಆಯುಕ್ತರನ್ನು ಅಮಾನತು ಮಾಡಲಾಗಿದೆ. ಈಗ ಇರುವುದು ಮುಖ್ಯಮಂತ್ರಿಗಳ ಸರದಿ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಬುಧವಾರ ಪಕ್ಷದ ಕಚೇರಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ವಾಲ್ಮೀಕಿ(Valmiki Nigama) ನಗಮದಲ್ಲಿ ಹಗರಣ ನಡೆದಿದೆ ಎಂದಾಗ, ನಡೆದಿಲ್ಲ ಎಂದರು. ಮುಡಾದಲ್ಲಿ ಅಕ್ರಮ ನಡೆದಿಲ್ಲ ಎಂದರು. ಈಗ ಹಿಂದಿನ ಆಯುಕ್ತರನ್ನು ಅಮಾನತು ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡಬೇಕಾಗುತ್ತೆ. ನಿನ್ನೆ ಛಲವಾದಿ ನಾರಾಯಣಸ್ವಾಮಿಯವರ ವಿರುದ್ಧ ದೂರು ಕೊಡಲು ಹೋದಾಗ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಪಕ್ಷದ ಹಿರಿಯ ನಾಯಕರು ಯಾಕೆ ಬರಲಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಬೇಕು ಎಂದರು.

ಚೆನ್ನಪಟ್ಟಣದಿಂದ ಸ್ಪರ್ಧಿಸಲು ಸಿ.ಪಿ ಯೋಗೇಶ್ವರರು ಬಯಸಿದ್ದಾರೆ. ಸಂಡೂರು, ಶಿಗ್ಗಾವಿಯಲ್ಲಿಯೂ ಆಕಾಂಕ್ಷಿಗಳಿದ್ದಾರೆ. ಇತ್ತೀಚೆಗೆ ಈ ಬಗ್ಗೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚೆ ನಡೆಸಲಾಗಿದೆ. ರಾಜ್ಯ ಮಟ್ಟದಲ್ಲಿಯೂ ಈ ಕುರಿತು ಚರ್ಚೆ ನಡೆಸಿ ಟಿಕೆಟ್ ಆಕಾಂಕ್ಷಿಗಳ ಹೆಸರನ್ನು ದೆಹಲಿಗೆ ಕಳಿಸಿಕೊಡಲಾಗುವುದು ಅಂತಾ ಹೇಳಿದರು.

WhatsApp Group Join Now
Telegram Group Join Now
Share This Article