ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ರಾಜ್ಯದಲ್ಲಿನ ನಗರಸಭೆ(Municipal), ಪುರಸಭೆ, ಪಟ್ಟಣ ಪಂಚಾಯ್ತಿಯಲ್ಲಿನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿಯನ್ನು ಇತ್ತೀಚೆಗೆ ಸರ್ಕಾರ ಪ್ರಕಟಿಸಿದೆ. ಇದರಿಂದಾಗಿ ಸ್ಥಳೀಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈಗ ಜಿಲ್ಲೆಯ ಇಂಡಿ(Indi) ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ(Election) ದಿನಾಂಕ ನಿಗದಿಯಾಗಿದೆ. ಇದರೊಂದಿಗೆ ಬಹುನಿರೀಕ್ಷಿತ ರಾಜಕೀಯ ಕದನಕ್ಕೆ ಜಿದ್ದಾಜಿದ್ದಿ ನಡೆಯಲಿದೆ. ಆಗಸ್ಟ್ 26ರಂದು ಚುನಾವಣೆ ನಡೆಯಲಿದೆ ಎಂದು ಚುನಾವಾಧಿಕಾರಿ ಹಾಗೂ ತಹಶೀಲ್ದಾರ್ ಬಿ.ಎಸ್ ಕಡಕಭಾವಿ ತಿಳಿಸಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಜಾತಿ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಅದೇ ದಿನ ನಾಮಪತ್ರ ಸಲ್ಲಿಕೆ, ಪರಿಶೀಲನೆ, ಹಿಂದಕ್ಕೆ ಪಡೆಯುವುದರ ಜೊತೆಗೆ ಅವಶ್ಯ ಬಿದ್ದರೆ ಮತದಾನ(Voting) ಸಹ ನಡೆಯಲಿದೆ. ಈ ಸಂಬಂಧ ಇಂದು ಮಧ್ಯಾಹ್ನ ಸಭೆ ಕರೆಯಲಾಗಿದೆ. ಸಭೆಯಲ್ಲಿ ಸದಸ್ಯರು, ವಿಧಾನಸಭಾ ಹಾಗೂ ಲೋಕಸಭಾ ಸದಸ್ಯರು ಹಾಜರಿರಲು ಕೋರಲಾಗಿದೆ. 23 ಸದಸ್ಯರ ಬಲವನ್ನು ಪುರಸಭೆ ಹೊಂದಿದೆ.