ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಲಾಗಿದೆ. ಅಕ್ಟೋಬರ್ 14ರ ತನಕ ಅವಧಿ ವಿಸ್ತರಿಸಿ ಜನಪ್ರತಿನಿಧಿಗಳು ನ್ಯಾಯಾಲಯ ಆದೇಶ ನೀಡಿದೆ.
2020ರಿಂದ 22ರ ತನಕ ಶಾಸಕ ಮುನಿರತ್ನ ನನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ. ಬೆದರಿಕೆ ಹಾಕಿ ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎಂದು 40 ವರ್ಷದ ಮಹಿಳೆ ದೂರು ಸಲ್ಲಿಸಿದ್ದಾರೆ. ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಜಾಮೀನು ಸಿಕ್ಕಿದೆ. ಆದರೆ, ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ.