ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ನಡುರಸ್ತೆಯಲ್ಲೇ ಮಹಿಳೆಗೆ 11 ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಸುಂಕದಕಟ್ಟೆ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಯ ಮೇಲೆ ಚಾಕುವಿನಿಂದ ದಾಳಿ ಮಾಡಿ ಕೊಲೆ ಮಾಡಲಾಗಿದೆ. ರೇಖಾ ಕೊಲೆಯಾದ ಮಹಿಳೆಯಾಗಿದ್ದು, ಲೋಕೇಶ್ ಕೊಲೆ ಆರೋಪಿಯಾಗಿದ್ದಾನೆ.
ರೇಖಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಲೋಕೇಶ್ ರೇಖಾಳ 2ನೇ ಪತಿಯಾಗಿದ್ದು, ಆಕೆಯ ಮೇಲೆ ಅನುಮಾನ ಪಟ್ಟು ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ತುಮಕೂರು ಜಿಲ್ಲೆ ಶಿರಾ ಮೂಲದ ರೇಖಾ ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ಬೆಂಗಳೂರಿಗೆ ಬಂದು ನೆಲೆಸಿದ್ದರು. ಆರೋಪಿ ಲೋಕೇಶಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.