ಪ್ರಜಾಸ್ತ್ರ ಸುದ್ದಿ
ಬಳ್ಳಾರಿ(Ballari): ಕೊಪ್ಪಳ ಜಿಲ್ಲೆ ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಮಂಗಳವಾರ ತಡರಾತ್ರಿ ಕೊಲೆ ಮಾಡಲಾಗಿದೆ. ಈ ಪ್ರಕರಣ ಸಂಬಂಧ ಬುಧವಾರ ನಾಲ್ವರು ಆರೋಪಿಗಳನ್ನು ಬಳ್ಳಾರಿಯ ಕಂಪ್ಲಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಮೈಲಾರಿ ಅಲಿಯಾಸ್ ವಿಜಯ, ಭೀಮ, ಧನಂಜಯ ಹಾಗೂ ಸಲೀಂ ಅನ್ನೋ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊಲೆಯಾದ ವೆಂಕಟೇಶ ಸ್ನೇಹಿತರೊಂದಿಗೆ ಊಟಕ್ಕೆ ಹೋಗಿದ್ದ. ವಾಪಸ್ ಬರುವಾಗ ರಾತ್ರಿ 2 ಗಂಟೆಯ ಸುಮಾರಿಗೆ ಗಂಗಾವತಿಯ ನಗರದ ಲೀಲಾವತಿ ಆಸ್ಪತ್ರೆಯ ಮುಂಭಾಗದಲ್ಲಿ ಆತನ ಬೈಕ್ ಗೆ ಕಾರು ಗುದ್ದಿಸಿ ಆತ ಬೀಳುತ್ತಿದ್ದಂತೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಗಂಗಾವತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.