ಪ್ರಜಾಸ್ತ್ರ ಸುದ್ದಿ
ಮಂಡ್ಯ(Manday): ಕೆರಗೋಡು ಭಾಗದಲ್ಲಿ ಶ್ರೀರಾಮ್ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಇಂದು ಕಾರ್ಯಕ್ರಮದಲ್ಲಿ ಭಾಗವಹಿಸಲು ಬರಬೇಕಿತ್ತು. ಆದ್ರೆ, ಶಾಂತಿ ಮತ್ತು ಸುವ್ಯವಸ್ಥೆ ಕಾರಣಕ್ಕೆ ಮಂಡ್ಯ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಹನುಮಧ್ವಜ ಇಳಿಸಿದ ಘಟನೆಗೆ 2 ವರ್ಷ ಆದ ಹಿನ್ನಲೆಯಲ್ಲಿ ಕರಾಳ ದಿನ ಆಚರಿಸಲು ಪಂಜಿನ ಮೆರವಣಿಗೆ ನಡೆಸಲು ಆಯೋಜಿಸಲಾಗಿತ್ತು.
ಇದರಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಲು ಮುತಾಲಿಕ್ ಕರೆ ನೀಡಿದ್ದರು. ಪ್ರಚೋದನಕಾರಿ ಹೇಳಿಕೆ, ಭಾಷಣದಿಂದ ಶಾಂತಿ ಸುವ್ಯವಸ್ಥೆ ಹಾಳಾಗುವ ಸಾಧ್ಯತೆಯಿದೆ ಎಂದು ಎಸ್ಪಿ ಶೋಭಾರಾಣಿ ಅವರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದರು. ಈ ವಿಚಾರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ್, ಬಿಎನ್ಎಸ್ಎಸ್ 2023 ಸೆಕ್ಷನ್ 163ರ ಅಡಿಯಲ್ಲಿ ಮುತಾಲಿಕ್ ಮಂಡ್ಯ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಆದೇಶಿಸಿದ್ದಾರೆ.




