ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ಸಂಸತ್ತಿನಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಕುರಿತಾಯಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಖಂಡಿಸಿ ಇಂದು ಮೈಸೂರು ಹಾಗೂ ಮಂಡ್ಯ ಬಂದ್ ಗೆ ಕರೆ ನೀಡಲಾಗಿದೆ. ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿ ಬಂದ್ ಗೆ ಕರೆ ಕೊಟ್ಟಿದೆ. ಮುಂಜಾನೆಯಿಂದ ಸಂಜೆ 4 ಗಂಟೆಯ ತನಕ ಬಂದ್ ಇರಲಿದೆ ಎಂದು ಮಾಜಿ ಮೇಯರ್ ಪುರುಷೋತ್ತಮ ಹೇಳಿದ್ದಾರೆ.
ಈ ಬಂದ್ ಗೆ ದಲಿತಪರ ಸಂಘಟನೆಗಳು, ರೈತಪರ ಸಂಘಟನೆಗಳು, ಬೀದಿ ಬದಿ ವ್ಯಾಪಾರಿಗಳು, ಕಾರು ಚಾಲಕರ ಸಂಘಟನೆ, ಹೋಟೆಲ್ ಮಾಲೀಕರ ಸಂಘ ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳು ಬೆಂಬಲ ನೀಡಿವೆ. ತುರ್ತು ಸೇವೆಗಳು ಹೊರತುಪಡಿಸಿ ಉಳಿದವುಗಳು ಸಂಪೂರ್ಣ ಬಂದ್ ಆಗಿದ್ದು, ಪರಿಸ್ಥಿತಿ ನೋಡಿಕೊಂಡು ಸಾರಿಗೆ ವ್ಯವಸ್ಥೆ ಒದಗಿಸುವ ಕುರಿತು ಅಧಿಕಾರಿಗಳು ನಿರ್ಧಾರ ಮಾಡಿದ್ದಾರೆ. ಎಂದಿನಂತೆ ಶಾಲಾ, ಕಾಲೇಜುಗಳು ನಡೆಯುತ್ತಿವೆ. ಈ ಎರಡು ಜಿಲ್ಲೆಗಳಲ್ಲಿ ಸಂಜೆಯವರೆಗೆ ಬಂದ್ ಇರಲಿದೆ.