ಪ್ರಜಾಸ್ತ್ರ ಸುದ್ದಿ
ಪಾಟ್ನಾ(Patna): ಬಿಜೆಪಿ ನಾಯಕ, ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆಯ ಆರೋಪಿ ಮಂಗಳವಾರ ಮುಂಜಾನೆ ಎನ್ ಕೌಂಟರ್ ನಲ್ಲಿ ಮೃತಪಟ್ಟಿದ್ದಾನೆ. ನಗರದ ಮಾಲ್ ಸಲಾಮಿ ಪ್ರದೇಶದಲ್ಲಿ ಶಂಕಿತನನ್ನು ಬಂಧಿಸುವ ಸಂದರ್ಭದಲ್ಲಿ ಎನ್ ಕೌಂಟರ್ ನಡೆದಿದೆ. ಕಾಸ್ ಅಲಿಯಾಸ್ ರಾಜಾ ಮೃತ ಆರೋಪಿ ಎಂದು ಗುರುತಿಸಲಾಗಿದೆ. ಈತ ಖೇಮ್ಕಾ ಹತ್ಯೆಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಎಂದು ಹೇಳಲಾಗುತ್ತಿದೆ.
ಉಮೇಶ್ ಎಂಬಾತ ಗುಂಡು ಹಾರಿಸಿದ್ದಾನೆ ಎಂದು ಶಂಕಿಸಲಾಗಿದೆ. ಶಂಕಿತ ಆರೋಪಿ ಕಾಸ್ ಅಲಿಯಾಸ್ ರಾಜಾನನ್ನು ಬಂಧಿಸಲು ಹೋದಾಗ ಗುಂಡು ಹಾರಿಸಿದ್ದಾನಂತೆ. ಆಗ ಆತನ ಮೇಲೆ ಗುಂಡು ಹಾರಿಸಲಾಗಿದ್ದು, ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಕಳೆದ ಶುಕ್ರವಾರ ರಾತ್ರಿ ಗೋಪಾಲ್ ಖೇಮ್ಕಾ ಕಾರು ಮನೆಯ ಗೇಟ್ ಹತ್ತಿರ ಬರುತ್ತಿದ್ದಂತೆ ಕಾದು ಕುಳಿತಿದ್ದವನು ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ.