ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಧರ್ಮಾಧಾರಿತ ಮೀಸಲಾತಿ ನೀಡುವುದು ಸಂವಿಧಾನದ ಆಶಯಗಳಿಗೆ ಸಂಪೂರ್ಣವಾಗಿ ವಿರುದ್ಧವಾದ್ದದ್ದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದರು. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿದ್ದು, ಗುತ್ತಿಗೆ ಕಾಮಗಾರಿಗಳಲ್ಲಿ(Reservation in Contract Works) ಮುಸಲ್ಮಾನರಿಗೆ ಶೇಕಡ 4ರಷ್ಟು ಮೀಸಲಾತಿ ನೀಡುತ್ತಿರುವುದು ಕಾಂಗ್ರೆಸ್ ಪಕ್ಷದ ಸಂವಿಧಾನ ವಿರೋಧಿ ಮನಸ್ಥಿತಿಗೆ ಸಾಕ್ಷಿ.
ಅಂದು ಸ್ವಾರ್ಥಕ್ಕಾಗಿ ನೆಹರು ಹಾಗೂ ಜಿನ್ನಾ ಭಾರತವನ್ನು ವಿಭಜಿಸಿದ ರೀತಿ ಇಂದು ನಾಡದ್ರೋಹಿ ಸಿಎಂ ಸಿದ್ದರಾಮಯ್ಯ ಅವರು ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕರ್ನಾಟಕದಲ್ಲಿ ಧರ್ಮದ ಆಧಾರದ ಮೇಲ ಸಮಾಜವನ್ನು ವಿಭಜಿಸಲು ಹೊರಟಿದ್ದಾರೆ. ಈ ಸಂವಿಧಾನ ವಿರೋಧಿ, ಧರ್ಮಾಧಾರಿತ ಮೀಸಲಾತಿಯನ್ನು ರದ್ದುಗೊಳಿಸುವವರೆಗೂ ಬಿಜೆಪಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಿದೆ ಎಂದು ಹೇಳಿದ್ದಾರೆ.