Ad imageAd image

ನಾಗಮಂಗಲ ಗಲಭೆ: ಪಿಎಸ್ಐ ಅಮಾನತು

ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ನಾಗಮಂಗಲ ಪಟ್ಟಣದ ಮೈಸೂರು ರಸ್ತೆಯ ದರ್ಗದ ಬಳಿ ನಡೆದ ಗಲಭೆ ಪ್ರಕರಣ ಸಂಬಂಧ

Nagesh Talawar
ನಾಗಮಂಗಲ ಗಲಭೆ: ಪಿಎಸ್ಐ ಅಮಾನತು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಮಂಡ್ಯ(Manday): ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ನಾಗಮಂಗಲ ಪಟ್ಟಣದ ಮೈಸೂರು ರಸ್ತೆಯ ದರ್ಗದ ಬಳಿ ನಡೆದ ಗಲಭೆ ಪ್ರಕರಣ ಸಂಬಂಧ ಪಿಎಸ್ಐ(PSI) ಅಶೋಕ್ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ. ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಕಳೆದ ರಾತ್ರಿ ಐಜಿಪಿ ಅಮಾನತು ಆದೇಶ ಹೊರಡಿಸಿದ್ದಾರೆ. ಎರಡು ಕೋಮುಗಳ ನಡುವಿನ ಗಲಾಭೆ ಹಿಂಸಾರೂಪಕ್ಕೆ ಹೋಗಿದ್ದು ರಾಜಕೀಯ ನಾಯಕರ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ.

ಈ ಘಟನೆ ಸಂಬಂಧ 150 ಆರೋಪಿಗಳ ವಿರುದ್ಧ ಎಫ್ಐಆರ್(FIR) ದಾಖಲಿಸಲಾಗಿದೆ. ಒಟ್ಟು 6 ಎಫ್ಐಆರ್ ಗಳು ದಾಖಲಾಗಿವೆ. ಇದುವರೆಗೂ 52 ಆರೋಪಿಗಳನ್ನು(Arrest) ಬಂಧಿಸಲಾಗಿದೆ. ಪರಿಸ್ಥಿತಿ ನಿಧಾನವಾಗಿ ಹತೋಟಿ ಬರುತ್ತಿದೆ. ಮುಂಜಾಗ್ರತ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article