Ad imageAd image

ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರ ಮಾಸ್ಟರ್ ಮೈಂಡ್: ಇಡಿ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣದಲ್ಲಿ ಪೊಲೀಸರ ವಶದಲ್ಲಿರುವ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಪ್ರಕರಣದ ಮಾಸ್ಟರ್ ಮೈಂಡ್ ಎಂದು ಜಾರಿ

Nagesh Talawar
ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರ ಮಾಸ್ಟರ್ ಮೈಂಡ್: ಇಡಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ವಾಲ್ಮೀಕಿ ಅಭಿವೃದ್ಧಿ(Valmiki Nigama) ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣದಲ್ಲಿ ಪೊಲೀಸರ ವಶದಲ್ಲಿರುವ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಪ್ರಕರಣದ ಮಾಸ್ಟರ್ ಮೈಂಡ್ ಎಂದು ಜಾರಿ ನಿರ್ದೇಶನಾಲಯದ ಬುಧವಾರ ತಿಳಿಸಿದೆ. ರಾಜ್ಯ ಸರ್ಕಾರದ ಸಂಸ್ಥೆಯ ಹಣವನ್ನು ಬೇರೆ ಕಡೆ ವರ್ಗಾಯಿಸಲಾದ ಹಣವನ್ನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗೆ ಬಳಸಲಾಗಿದೆ ಎಂದು ತಿಳಿಸಲಾಗಿದೆ. ಕೇಂದ್ರ ತನಿಖಾ ಸಂಸ್ಥೆ ಪ್ರಾಸಿಕ್ಯೂಷನ್ ದೂರನ್ನು ಬೆಂಗಳೂರಿನ ವಿಶೇಷ ಪ್ರಿವೆನ್ಷನ್ ಆಫ್ ಮನಿ ಲಾಂಡರಿಂಗ್ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆಯಂತೆ.

ಜಿ.ಜಿ ಪದ್ಮನಾಬ್, ಏಟಕಾರಿ ಸತ್ಯನಾರಾಯಣ್, ನಾಗೇಶ್ವರ್ ರಾವ್, ಸತ್ಯನಾರಾಯಣ್ ವರ್ಮಾ, ವಿಜಯಕುಮಾರಗೌಡ, ನೆಕ್ಕೆಂಟಿ ನಾಗರಾಜ್ ಸೇರಿದಂತೆ 24 ಜನರ ಸಹಾಯದಿಂದ ಹಗರಣ ನಡೆದಿದೆ. ಬಿ.ನಾಗೇಂದ್ರ ಇದರ ಮಾಸ್ಟರ್ ಮೈಂಡ್ ಎಂದು ಇಡಿ ತಿಳಿಸಿದೆ. ಖಾತೆಯ ಯಾವುದೇ ಸರಿಯಾದ ಅನುಮತಿಯಿಲ್ಲದೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಜಿ ರಸ್ತೆಯ ಬ್ಯಾಂಕ್ ಶಾಖೆಗೆ ಹಣ ವರ್ಗಾಯಿಸಲಾಗಿದೆ ಎಂದು ತಿಳಿಸಲಾಗಿದೆ. ಈ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಜುಲೈ 11ರಂದು ಬಿ.ನಾಗೇದ್ರ ಅವರನ್ನ ಬಂಧಿಸಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ.

WhatsApp Group Join Now
Telegram Group Join Now
Share This Article