ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕರ್ನಾಟಕದ ಪ್ರಸಿದ್ಧ ನಂದಿನಿ ಬ್ರ್ಯಾಂಡ್ ಇದೀಗ ದೋಸ್ತೆ, ಇಡ್ಲಿ ಹಿಟ್ಟನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಬುಧವಾರ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರೋಟಿನ್ ಯುಕ್ತ ಹಿಟ್ಟನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರಲ್ಲಿ ಪ್ರಾಯೋಗಿಕ ದೋಸೆ ಹಾಗೂ ಇಡ್ಲಿ ಹಿಟ್ಟಿನ ಪ್ಯಾಕೇಟ್ ಇದೆ. 450 ಗ್ರಾಂ ತೂಕದ ಪ್ಯಾಕೇಟಿಗೆ 40 ರೂಪಾಯಿ, 900 ಗ್ರಾಂ ತೂಕದ ಪ್ಯಾಕೇಟಿಗೆ 80 ರೂಪಾಯಿ ದರ ನಿಗದಿ ಮಾಡಲಾಗಿದೆ. ಈ ವೇಳೆ ಸಚಿವರಾದ ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ವೆಂಕಟೇಶ್ವರ್ ಹಾಗೂ ಕೆಂಎಂಎಫ್ ಅಧ್ಯಕ್ಷ ಭೀಮಾನಾಯ್ಕ ಸೇರಿ ಇತರರು ಹಾಜರಿದ್ದರು.