Ad imageAd image

ನೀಟ್-ಯುಜಿ-2026 ಪರೀಕ್ಷೆ ರದ್ದು

Nagesh Talawar
ನೀಟ್-ಯುಜಿ-2026 ಪರೀಕ್ಷೆ ರದ್ದು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪದ ಕಾರಣಕ್ಕೆ ಇದೆ ಮೇ 3ರಂದು ನಡೆದಿದ್ದ ನೀಟ್-ಯುಜಿ 2026ನೇ ಸಾಲಿನ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ತಿಳಿಸಿದೆ. ಶೀಘ್ರದಲ್ಲಿ ನೀಟ್ ಮರು ಪರೀಕ್ಷೆಯ ದಿನಾಂಕ ತಿಳಿಸಲಾಗುವುದು ಎಂದಿದೆ.

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಅನ್ನೋ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲದೆ ಇದರ ತನಿಖೆಯನ್ನು ಸಿಬಿಐಗೆ ವಹಿಸಿದೆ. ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಎನ್ ಟಿಎ ತಿಳಿಸಿದೆ. ಮರು ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಳ್ಳಲು ಎನ್ ಟಿಎ ಅಧಿಕೃತ ವೆಬ್ ಸೈಟ್ ಮೂಲಕ ಪಡೆದುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ತಿಳಿಸಿದೆ.

WhatsApp Group Join Now
Telegram Group Join Now
Share This Article