ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕುಡಿಯುವ ನೀರಿನ ಸಲುವಾಗಿ ಪ್ರತಿ ತಾಲೂಕಿಗೆ ಒಂದು ಕೋಟಿ ರೂಪಾಯಿ ಅನುದಾನ ನೀಡುವ ವ್ಯವಸ್ಥೆ ಈಗಾಗ್ಲೇ ಮಾಡಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭಾನುವಾರ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವರು, ಜಿಲ್ಲಾಧಿಕಾರಿಗಳು, ಪೊಲೀಸರಿಗೆ ಭಾನುವಾರ ಅನ್ನೋದು ಇಲ್ಲ. ಬರಗಾಲದ ಸಿದ್ಧತೆ ಸಂಬಂಧ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಾಗುತ್ತಿದೆ ಎಂದರು.
ಇನ್ನು ಫಿಫಾ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಣೆಗಾಗಿ ಹೋಟೆಲ್ ಹಾಗೂ ರೆಸ್ಟೋರೆಂಟ್ ಗಳಿಗೆ ಬೆಳಗಿನಜಾವ 3.30ರ ತನಕ ಕೆಲಸ ನಿರ್ವಹಿಸಲು ವಿಶೇಷ ಅನುಮತಿ ನೀಡಲಾಗಿದೆ. ಫುಟ್ಬಾಲ್ ಅಭಿಮಾನಿಗಳು ತಾಳ್ಮೆಯಿಂದ ವರ್ತಿಸಬೇಕು. ಪೊಲೀಸರು ಎಲ್ಲ ಕಡೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ ಎಂದರು.



