LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಪ್ರಜಾಸ್ತ್ರ ಸುದ್ದಿ

ಚಿಕ್ಕಮಗಳೂರು(Chikkamagaloru): ಪಿಜಿಯಲ್ಲಿ ವಾಸವಾಗಿದ್ದ 10ನೇ(SSLC Student) ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೃಂಗೇರಿಯಲ್ಲಿ ನಡೆದಿದೆ. ಎಸ್.ಕೆ ಧ್ರುವ ಎನ್ನುವಂತಹ ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಶೃಂಗೇರಿ(Shrungeri) ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಶಿವಮೊಗ್ಗ ಜಿಲ್ಲೆ ಭದ್ರತಾವತಿ ಮೂಲದ ಎಸ್.ಕೆ ಧ್ರುವ ಎನ್ನುವ ವಿದ್ಯಾರ್ಥಿ ಪಿಜಿಯಲ್ಲಿ ವಾಸವಾಗಿದ್ದುಕೊಂಡು ಶೃಂಗೇರಿಯ ಶಾಲೆಯೊಂದರಲ್ಲಿ ಓದುತ್ತಿದ್ದ. ಇಂದು ಪೂರ್ವ ಸಿದ್ಧತಾ ಪರೀಕ್ಷೆಗೆ ಗೈರಾಗಿದ್ದಾನೆ. ಆಗ ಶಾಲೆಯವರು ಪೋಷಕರಿಗೆ ಫೋನ್ ಮಾಡಿ ವಿಚಾರಿಸಿದ್ದಾರೆ. ಅವರು ಪಿಜಿಯ ಮಾಲೀಕರಿಗೆ ಫೋನ್ ಮಾಡಿದ್ದಾರೆ. ಆಗ ಆತನ ರೂಮಿಗೆ ಬಂದು ನೋಡಿದರೆ ಆತ್ಮಹತ್ಯೆ(Suicide) ಮಾಡಿಕೊಂಡಿರುವುದು ತಿಳಿದಿದೆ. ಮಗನ ಸಾವಿನಿಂದ ಕುಟುಂಬಸ್ಥರ ನೋವು ಹೇಳತೀರದಾಗಿದೆ. ಯಾವ ಕಾರಣಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡ ಎನ್ನುವುದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST