LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉಧಂಪುರದಲ್ಲಿ ಕಂದಕಕ್ಕೆ ಬಿದ್ದ ಬಸ್: 15 ಜನರ ಸಾವು

ಪ್ರಜಾಸ್ತ್ರ ಸುದ್ದಿ

ಶ್ರೀನಗರ(Srinagara): ಬಸ್ ವೊಂದು ಕಂದಕಕ್ಕೆ ಉರುಳಿ ಬಿದ್ದು 15 ಜನರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ನಡೆದಿದೆ. ರಾಮನಗರದ ಕಗೋರ್ಟ್ ತಿರುವಿನಲ್ಲಿ ಹೊರಟಿದ್ದ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ.

ರಾಮನಗರದಿಂದ ಉಧಂಪುರಕ್ಕೆ ಬಸ್ ಹೊರಟಿತ್ತು. ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಜಿಲ್ಲಾಧಿಕಾರಿಯೊಂದಿಗೆ ಚರ್ಚಿಸಿದ್ದು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ತಿಳಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST