LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯಪುರ: ಪಿಎಸ್ಐ ಪರೀಕ್ಷೆ ಬರೆದ 3,471 ಅಭ್ಯರ್ಥಿಗಳು

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಜಿಲ್ಲೆಯ 11 ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಸಬ್(PSI) ಇನ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಯುತ್ತಿವೆ. ಗುರುವಾರ ನಡೆದ ಪರೀಕ್ಷೆಯ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಪರೀಕ್ಷಾ ಕೇಂದ್ರಗಳಿಗೆ ಭೇಟಿ ಕೊಟ್ಟು ತಪಾಸಣೆ ನಡೆಸಿದರು. ನಗರದ ಗಾಂಧಿ ವೃತ್ತದಲ್ಲಿರುವ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಪಿಡಿಜೆ ಕಾಲೇಜು ಹಾಗೂ ವಿ.ಬಿ.ದರಬಾರ್ ಕಾಲೇಜಿನ ಪರೀಕ್ಷಾ(Exam Cantera) ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.



ಪರೀಕ್ಷೆಗಳು ಅತ್ಯಂತ ಸುಗಮ ಹಾಗೂ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸುವಂತೆ ಸಂಬಂಧಿಸಿದವರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಕೆ ಹೊಸಮನಿ ಇದ್ದರು. ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಯ ಪರೀಕ್ಷೆಗೆ ಜಿಲ್ಲೆಯಲ್ಲಿ 4,920 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪರೀಕ್ಷೆಗೆ 1,449 ಅಭ್ಯರ್ಥಿಗಳು ಗೈರಾಗಿದ್ದು, 3,471 ಅಭ್ಯರ್ಥಿಗಳು ಹಾಜರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST