LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಲುವೆಗೆ ಬಿದ್ದ ಬಸ್, 30 ಜನರಿಗೆ ಗಾಯ

ಪ್ರಜಾಸ್ತ್ರ ಸುದ್ದಿ

ಕೋಲಾರ(Kolara): ಆರತಕ್ಷತೆ ಕಾರ್ಯಕ್ರಮ ಮುಗಿಸಿಕೊಂಡು ಹೋಗುತ್ತಿದ್ದ ಬಸ್ ವೊಂದು ಪಲ್ಟಿಯಾಗಿ ಕಾಲುವೆಗೆ ಬಿದ್ದ ಪರಿಣಾಮ 30 ಜನರು ಗಾಯಗೊಂಡಿರುವ ಘಟನೆ ತಾಲೂಕಿನ ಸುಗಟೂರು ಗ್ರಾಮದ ಹತ್ತಿರ ನಡೆದಿದೆ. ಕೋಲಾರದ ವಧು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ವರನ ಆರತಕ್ಷತೆ ಕಾರ್ಯಕ್ರಮ ಮುಗಿಸಿಕೊಂಡು ಹೋಗುವಾಗ ಈ ಅಪಘಾತ ನಡೆದಿದೆ.

ಕೋಲಾರ ಹೊರವಲಯದ ರತ್ನ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಗ್ರಾಮಕ್ಕೆ ಬಸ್ ಹೊರಟಿತ್ತು. ಚಾಲಕನ ನಿಯಂತ್ರಣ ತಪ್ಪಿ ಬಸ್ ಕಾಲುವೆಗೆ ಬಿದ್ದಿದೆ. ಬಸ್ಸಿನಲ್ಲಿ 55 ಜನರಿದ್ದರು. 30 ಜನರು ಗಾಯಗೊಂಡಿದ್ದಾರೆ. ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರು ನೀರಿಗೆ ಬಿದ್ದವರನ್ನು ರಕ್ಷಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST