LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದ ಸಹಪಾಠಿ

ಪ್ರಜಾಸ್ತ್ರ ಸುದ್ದಿ

ಪುತ್ತೂರು(Puttoru): ಪ್ರೀತಿ(Love) ವಿಚಾರಕ್ಕೆ ವಿದ್ಯಾರ್ಥಿನಿಗೆ ಚಾಕು ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಂಬೆಟ್ಟು ಸರ್ಕಾರಿ ಕಾಲೇಜಿನಲ್ಲಿ ಮಂಗಳವಾರ ನಡೆದಿದೆ. ವಿದ್ಯಾರ್ಥಿನಿ ಮುಸ್ಲಿಂ(Muslim) ಆಗಿದ್ದು, ಚಾಕು ಇರಿದ ಸಹಪಾಠಿ ಹಿಂದೂ(Hindu) ಆಗಿದ್ದಾನೆ. ಇದರಿಂದಾಗಿ ಆಸ್ಪತ್ರೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ವಿದ್ಯಾರ್ಥಿನಿ ಕೈಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಯಾವುದೇ ರೀತಿ ಪ್ರಾಣಾಪಾಯವಿಲ್ಲವೆಂದು ತಿಳಿದು ಬಂದಿದೆ.

ಪ್ರೀತಿ ನಿರಾಕರಿಸಿದ ಕಾರಣಕ್ಕೆ ಚಾಕುವಿನಿಂದ ಇರಿಯಲಾಗಿದೆ ಎಂದು ಹೇಳಲಾಗುತ್ತಿದೆ. ವಿದ್ಯಾರ್ಥಿ ಅನ್ಯಕೋಮಿನವನಾಗಿರುವುದರಿಂದ ಬದಲಿ ಹೆಸರು ಹೇಳುವಂತೆ ಕಾಲೇಜಿನ ಶಿಕ್ಷಕಿ ಒತ್ತಡ ಹೇರಿದ್ದಾರೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ಪುತ್ತೂರು ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST