LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ನಿಯನ್ನು ಹತ್ಯೆ ಮಾಡಿದ ಪತಿ?

ಪ್ರಜಾಸ್ತ್ರ ಸುದ್ದಿ

ಉಡುಪಿ(Udupi): ಪತಿಯೇ ಪತ್ನಿಯನ್ನು ಹತ್ಯೆ(Murder) ಮಾಡಿದ ಘಟನೆ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡದಿ ಹೆದ್ದಾರಿಯಲ್ಲಿ ನಡೆದಿದೆ. ಶುಕ್ರವಾರ ಮುಂಜಾನೆ ಈ ಘಟನೆ ನಡೆದಿದೆ. ಜಯಶ್ರೀ(28) ಕೊಲೆಯಾದ ದುರ್ದೈವಿ. ಕಿರಣ್ ಉಪಾಧ್ಯ(30) ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಕಾರ್ಕಡ ಅಂಗನವಾಡಿ ಹತ್ತಿರ ಬಾಡಿಗೆ ಮನೆಯಲ್ಲಿ ಇವರು ವಾಸವಾಗಿದ್ದರು.

ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ಜಯಶ್ರೀ ಬೀದರ ದೊಣಗಪುರ ಮೂಲದವರಾಗಿದ್ದಾರೆ. ಮನೆಯ ಟೆರೆಸ್ ನಿಂದ ಜಯಶ್ರೀ ಬಿದ್ದು ಗಾಯಗೊಂಡಿದ್ದಳು. ಆಸ್ಪತ್ರೆಗೆ ದಾಖಲಿಸಿದ್ದೆ ಅನ್ನೋದು ಕಿರಣ್ ಮಾತುಗಳಂತೆ. ಅಜ್ಜರಕಾಡು ಆಸ್ಪತ್ರೆಯಲ್ಲಿ ಮೃತದೇಹವಿದ್ದು, ಕುಟುಂಬಸ್ಥರು ಬರುವ ಸಲುವಾಗಿ ಪೊಲೀಸರು ಕಾಯುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಮೇಲೆ ಸತ್ಯಾಸತ್ಯತೆ ತಿಳಿಯಲಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST