LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭ್ರಷ್ಟಾಚಾರಿಗಳು ಎಂದು 11 ಜನರ ಫೋಟೋ ಬಿಟ್ಟ ಆಪ್

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಮತ್ತೊಮ್ಮೆ ದೆಹಲಿ ಗದ್ದುಗೆ ಹಿಡಿಯುವ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸಬೇಕು ಎನ್ನುತ್ತಿರುವ ಆಮ್ ಆದ್ಮಿ ಪಾರ್ಟಿ, ಎಕ್ಸ್ ನಲ್ಲಿ ಪೋಸ್ಟ್ ವೊಂದು ಮಾಡಿದೆ. ಭ್ರಷ್ಟಾಚಾರಿಗಳು ಎಂದು ಬರೆದು 11 ರಾಜಕೀಯ ನಾಯಕರ ಫೋಟೋಗಳನ್ನು ಬಿಡುಗಡೆ ಮಾಡಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಬಣದೊಂದಿಗೆ ಕೈಜೋಡಿಸಿದ ಆಪ್, ರಾಹುಲ್ ಗಾಂಧಿ ಫೋಟೋವನ್ನು ಇಲ್ಲಿ ಸೇರಿಸಿದೆ.

ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆಪ್ ಬಿಟ್ಟು ಕಾಂಗ್ರೆಸ್ ಸೇರಿದ ಅಜಯ್ ಮಾಕನ್, ಸಂದೀಪ್ ದೀಕ್ಷಿತ್, ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್, ರಮೇಶ್ ಬಿಢೂಡಿ, ವಿರೇಂದ್ರ ಸಚ್ ದೇವ್, ವಿಜಯೇಂದ್ರ ಗುಪ್ತಾ, ಪರ್ವೇಶ್ ವರ್ಮಾ ಅವರ ಫೋಟೋಗಳನ್ನು ಪೋಸ್ಟ್ ಮಾಡಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಮಹಿಳಾ ಘಟಕದ ರಾಷ್ಟ್ರೀಯ ಅಧ್ಯಕ್ಷೆ ಹಾಗೂ ಕಲ್ಕಾಜಿ ಕ್ಷೇತ್ರದ ಅಭ್ಯರ್ಥಿ ಅಲ್ಕಾ ಲಾಂಬಾ ಆಮ್ ಆದ್ಮಿ ಪಕ್ಷವು ಇಂಡಿಯಾ ಮೈತ್ರಿಕೂಟವನ್ನು ತೊರೆಯುವಂತೆ ಹೇಳಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST