LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಐಸಿಸಿ ಅಧ್ಯಕ್ಷರ ಗೈರು, ಸಚಿವ ಸಂಪುಟ ವಿಸ್ತರಣೆ ಸಭೆ ಮುಂದೂಡಿಕೆ

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸುವ ಸಂಬಂಧ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ನವದೆಹಲಿಗೆ ತೆರಳಿದ್ದಾರೆ. ಆದ್ರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗೈರಾಗಿದ್ದ ಕಾರಣ ಸಭೆಯನ್ನು ಮುಂದೂಡಲಾಗಿದೆ.

ಖರ್ಗೆ ಅವರ ಮಗನಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಹೀಗಾಗಿ ಅವರು ಬೆಂಗಳೂರಿಗೆ ಬಂದಿದ್ದಾರೆ. ಇನ್ನೊಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಸಹ ಅನಾರೋಗ್ಯದ ಕಾರಣದಿಂದ ಗೈರಾಗಿದ್ದರು. ಹೀಗಾಗಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಪ್ರಾಥಮಿಕವಾಗಿ ಚರ್ಚಿಸಲಾಗಿದೆಯಂತೆ. ಅಗತ್ಯಬಿದ್ದರೆ ವಾಪಸ್ ಕರೆಸುವುದಾಗಿ ಹೇಳಿದ್ದಾರೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST