LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಂದಗಿ: ಕೋಲ್ಕತ್ತಾ ಘಟನೆ ಖಂಡಿಸಿ ಎಬಿವಿಪಿ ಪ್ರತಿಭಟನೆ

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ಕೋಲ್ಕತ್ತಾ ಆರ್.ಜಿ ಕಾರ್ ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ(Rape and Murder) ಕೊಲೆ ಪ್ರಕರಣವನ್ನು ಖಂಡಿಸಿ, ಪಟ್ಟಣದಲ್ಲಿ ಎಬಿವಿಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಶನಿವಾರ ಪಟ್ಟಣದಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿ, ತಪ್ಪಿತಸ್ಥರಿಗೆ ಸೂಕ್ತ ಕಾನೂನು ಕ್ರಮವಾಗಬೇಕು ಎಂದು ಘೋಷಣೆ ಕೂಗಿದರು.

ಕಳೆದ ಹಲವು ತಿಂಗಳುಗಳಿಂದ ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಮುಖ್ಯಮಂತ್ರಿ ಮಮತಾ(mamata banerjee) ಬ್ಯಾನರ್ಜಿ ಸರ್ಕಾರವು ಇಂತಹ ದುಷ್ಕೃತ್ಯಗಳಲ್ಲಿ ತೊಡಗಿರುವವರನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ. ಬಂಗಾಳದಲ್ಲಿ ನಡೆಯುತ್ತಿರುವ ಇಂತಹ ಘಟನೆಗಳು ನಾಚಿಕೆಗೇಡಿನ ಸಂಗತಿ ತಾಲೂಕು ಸಂಚಾಲಕರು ವಿಶಾಲ ನಾಯ್ಕೊಡಿ ಆಕ್ರೋಶ ವ್ಯಕ್ತಪಡಿಸದರು.

ಎಬಿವಿವಿ ಕಾರ್ಯಕರ್ತರಾದ ಶ್ರೀಧರ ಭಜಂತ್ರಿ, ಸುನಿಲ ರಾಠೋಡ, ನಿಂಗರಾಜ ಪೂಜಾರಿ, ಭೀಮಾಶಂರ ಹಿರೇಮಠ, ಶ್ರವಣಕುಮಾರ ಹೂವಿನ್ನಳ್ಳಿ, ಮಲ್ಲಿಕಾರ್ಜುನ ಹಾಗೂ ವಿದ್ಯಾನಿಕೇತನ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST