ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಸ್ಯಾಂಡಲ್ ವುಡ್ ನ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರುಳಿ ಅವರ ತಾಯಿ ಹಾಗೂ ನಿರ್ಮಾಪಕ ಎಚ್.ಎ.ಚಿನ್ನೇಗೌಡ ಅವರ ಪತ್ನಿಯಾಗಿರುವ ಜಯಮ್ಮ ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಮೌಂಟ್ ಕಾರ್ಮೆಲ್ ಕಾಲೇಜು ಅಪಾರ್ಟ್ ಮೆಂಟ್ ಹತ್ತಿರ ಮಧ್ಯಾಹ್ನ 3 ಗಂಟೆಯ ತನಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಇವರ ನಿಧನಕ್ಕೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.



