ಪ್ರಜಾಸ್ತ್ರ ಸುದ್ದಿ
ಮುಂಬೈ(Mumbai): ಸಾಮಾಜಿಕ ಹೋರಾಟಗಾರ ಅಣ್ಣ ಹಜಾರೆ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಂಗಳವಾರ ಆಪ್ತ ಸಹಾಯಕರು ಹೇಳಿದ್ದಾರೆ. ಅವರಲ್ಲಿ ವೈರಲ್ ಸೋಂಕು ಹಾಗೂ ನಿರ್ಜಲೀಕರಣ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಸೋಮವಾರ ಅಹಿಲ್ಯನಗರದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ. ವಿವಿಧ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿದ ಬಳಿಕ ಅವರ ಚಿಕಿತ್ಸೆ ಕುರಿತು ನಿರ್ಧರಿಸಲಾಗುವುದು ಎಂದು ಹೇಳಲಾಗುತ್ತಿದೆ.



